Thursday, October 16, 2008

meaning of riddles

Riddles have a distinguished literary ancestry, although the contemporary sort of conundrum that passes under the name of "riddle" may not make this obvious.Riddles are questions, often containing a descriptive element or metaphor, of which the listener has to guess the answer. The solution of the riddle is usually unexpected. Some riddles take the form of direct questions, but the answer may not be so straightforward, as it may be based on word play, special knowledge, or double meaning. Riddles aim to demonstrate the wisdom or wit of the riddler and to challenge the listener.

Monday, October 13, 2008

ಕನ್ನಡ ಜನಪ್ರಿಯ ಒಗಟುಗಳು

. ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ-ಕಣ್ಣು
. ಕಾಸಿನ ಕುದುರೆಗೆ ಬಾಲದ ಲಗಾಮು-ಸೂಜಿ ದಾರ
. ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ-ಗಿಳಿ
. ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?-ಮೂಗು, ಬಾಯಿ
. ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?-ಮೊಟ್ಟೆ
. ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು? ಕೋಳಿ
. ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?-ರೈಲು
. ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ-ಡಿಯಾರ
. ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ-ಕಲ್ಲಂಗಡಿ ಹಣ್ಣು
೧೦. ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ-ತೆಂಗು
೧೨. ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ-ನೀರು
೧೩.ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.-ದಾರಿ
೧೪. ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.-ಯುಗಾದಿ
೧೫. ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .-ಬದನೆಕಾಯಿ.
೧೬. ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು
೧೭. ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.-ಅಕ್ಕಿ
೧೮. ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.-ನವಿಲು.
೧೯. ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.-ನದಿ
೨೦. ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.-ಕೋಳಿ
೨೧. ಮೋಟು ಗೋಡೆ ಮೇಲೆ, ದೀಪ ಉರೀತಿದೆ.-ಮೂಗುಬೊಟ್ಟು
೨೨. ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.-ನೆರಳು
೨೩. ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ-ಗಾಣ
೨೪. ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ-ಶ್ಯಾವಿಗೆ
೨೫. ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು-ತೆಂಗಿನಕಾಯಿ
೨೬. ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ-ತಂಬೂರಿ
೨೭. ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ-ಪ್ಪೆ
೨೮. ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ-ಕಸಪೊರಕೆ
೨೯. ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು-ಉಪ್ಪು
೩೦. ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?-ನಕ್ಷೆ
೩೧. ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.- ಅನ್ನದ ಅಗುಳು.
೩೨. ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.-ಸಾಬೂನು.
೩೩. ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ.
೩೪. ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.-ನೀರು
೩೫. ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.-ಎಣ್ಣೆ ದೀಪ.
೩೬. ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.-ಬಾಳೆ ಹಣ್ಣು.
೩೭. ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.-ಕನ್ನಡಿ .
೩೮. ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?-ದತ್ತುರಿಯ ಮುಳ್ಳು.
೩೯. ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.-ಕಮಲ.
೪೦. ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.-ಗಿರಣಿ
೪೧. ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.-ದುಡ್ಡು.
೪೨. ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.-ಸಗಣಿ.
೪೩. ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.- ಗರಗಸ.
೪೪. ಕಡ್ಲೆ ಕಾಳಷ್ಟು ಹಿಂಡಿ ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.-ಹಲ್ಲುಪುಡಿ.
೪೫. ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.-ಗಡಿಗೆಮಜ್ಜಿಗೆ.
೪೬. ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .-ರೊಟ್ಟಿ, ದೋಸೆ
೪೭. ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ, ತಮ್ಮ ಇಳಿತ್ತಾನೆ-ಬೆಂಕಿ, ಸುಣ್ಣ ಹಚ್ಚಿದ ಹಂಚು, ಹೊಗೆ, ರೊಟ್ಟಿ
೪೮. ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.-ಕಣ್ಣು.
೪೯. ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.-ಬೆಣ್ಣೆ ಉಂಡೆ.
೫೦.ಕುತ್ತಿಗೆ ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.-ಅಂಗಿ.

Saturday, October 11, 2008

ಕನ್ನಡ ಜನಪ್ರಿಯ ಒಗಟುಗಳು

. ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ-ಮಾವು
. ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ-ಬೆಕ್ಕು
. ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ_ಕಪ್ಪೆ
. ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ ಕುತಗುಟ್ಟುವುದು-ಸುಣ್ಣ
. ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ-ದೀಪ
. ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ-ಚಪ್ಪಲಿ
. ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು ಕೆಳಗಾಗಿ ಓದುವುದು-ದಿ
. ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ-ಮೇಡು
. ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ-ಆಕಾಶ
೧೦. ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ-ಜೋಳದ ದಂಟು
೧೧. ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?-ಸಾಲಿಗ್ರಾಮ
೧೨. ಕರಿ ಹುಡುಗನಿಗೆ ಬಿಳಿ ಟೋಪಿ -ಹೆಂಡದ ಮಡಿಕೆ
೧೩. ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು-ನಾಣ್ಯ
೧೪. ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.-ತಿಗಣೆ
೧೫. ಕುದುರೆ ಬಾಲದಿಂದ ನೀರು ಕುಡಿಯುತ್ತದೆ-ಹೇನು
೧೬. ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.-ಸೀತ ಫಲ
೧೭. ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.-ಕಣ್ಣು
೧೮. ಮನೆ ಮೇಲೆ ಮಲ್ಲಿಗೆ ಹೂವು.-ಮಂಜು
೧೯. ಹಾರಿದರೆ ಹನುಮಂತ ಕೂಗಿದರೆ ಶಂಖ.-ಕಪ್ಪೆ
೨೦. ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.-ಸುಣ್ಣ
೨೧.ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.-ಪೋಸ್ಟ್ ಕಾರ್ಡ್
೨೨. ಬಿಳಿ ಕುದುರೆಗೆ ಹಸಿರು ಬಾಲ.-ಮೂಲಂಗಿ
೨೩. ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.-ಕುಂಕುಮ
೨೪. ಬರೋದ ಕಂಡು ಕೈ ಒಡ್ತಾರೆ.-ಬಸ್

Friday, October 10, 2008

ಕನ್ನಡ ಜನಪ್ರಿಯ ಒಗಟುಗಳು

೧. ಹಸಿರು ಮುಖಕ್ಕೆ ವಿಪರೀತ ಕೋಪ , ಕೋಪ ಮಾಡಿಕೊಳ್ಳದೆ ನಾನ್ಯಾರೆಂದು ಹೇಳಿ?-ಮೆಣಸಿನಕಾಯಿ
೨. ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು-ಬೆಳ್ಳುಳ್ಳಿ
೩. ಹಗಲಲ್ಲಿ ಮಾಯಾ ರಾತ್ರಿಯಲ್ಲಿ ಪ್ರತ್ಯಕ್ಷ ?ನಾನ್ಯಾರು ಹೇಳಿ?-ನಕ್ಷತ್ರ
೪. ಮೂರೂ ಪಕ್ಷಿಗಳು ಗೂಡಿಗೆ ಹೋಗುವಾಗ ಬೇರೆ ಬೇರೆ ಬಣ್ಣ ಬರುವಾಗ ಬಣ್ಣ-ಎಲೆ ಅದಿಕೆ
೫. ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ-ಬಾಳೆಲೆ
೬. ಎರಡು ಬಾವಿಗಳ ನಡುವೆಯೊಂದು ಸೇತುವೆ-ಮೂಗು
೭. ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ-ಕೋಟು ಅಂಗಿ
೮. ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು -ವಿಷ
೯ . ಒಬ್ಬಳು ಮುಲುಗಿದಳು, ಒಬ್ಬಳು ಕರಗಿದಳು , ಒಬ್ಬಳು ತೇಲಿದಳು -ಅಡಿಕೆ , ಸುಣ್ಣ
೧೦.ಹೋಗೋದು ಮುಳುಗೋದು ತರೋದು ಏನು?-ಬಿಂದಿಗೆ
೧೧. ಕಿರೀಟ ಇದೆ ರಾಜ ಅಲ್ಲ, ಕಲ ತಿಳಿಸುತ್ತ್ತೆ ಗಡಿಯಾರವಲ್ಲ-ಕೋಳಿ
೧೨. ಒಂದು ಹಣ್ಣಿಗೆ ಹನ್ನೆರಡು ತೊಳೆ ಮತ್ತೂ ಮೂವತ್ತು ಬೀಜ-ವರ್ಷ
೧೩. ಗುಂಡಾಕಾರ ಮೈಯೆಲ್ಲಾ ತೂತು-ದೋಸೆ
೧೪.ಬಂಗಾರದ ಗುಬ್ಬಿ ಬಾಲದಲ್ಲೇ ನೀರನ್ನು ಕುಡಿಯುತ್ತೆ-ಚಿಮಿಣಿ
೧೫. ಒಂದು ಮರ , ಮರದಾಗ ಅಲ್ಲ, ಅಲ್ಲಿನಾಗ ಕೊಬ್ರಿ ಗುಂಡ-ಆಕಾಶ ನಕ್ಷತ್ರ ಚಂದ್ರ
೧೩.ಹಗ್ಗ ಹಾಸಿದೆ ಕೋಣ ಮಲಗಿದೆ-ಕುಂಬಳಕಾಯಿ, ಬಳ್ಳಿ
೧೪. ನನ್ನ ಕಂಡರೆ ಎಲ್ಲರು ಓದೀತಾರೆ -ಚೆಂಡು
೧೫. ಹಳ್ಳಿ ಗಡಿಯಾರ, ಒಳ್ಳೆ ಆಹಾರ-ಕೋಳಿ
೧೬. ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು-ಏಲಕ್ಕಿ
೧೭. ಬೆಳ್ಳಿ ಬಟ್ಟಲಲ್ಲಿ ಮುತ್ತಿನ ಬಿಂದು-ತಾರೆ
೧೮. ಲಟಪಟ ಲೇಡಿಗೆ ಒಂದೇ ಕಣ್ಣು-ಸೂಜಿ
೧೯. ಹಸಿರು ಕೋಲಿಗೆ ಮುತ್ತಿನ ತುರಾಯಿ-ಜೋಳದ ತೆನೆ
೨೦. ಬಿಳಿ ಹುಲ್ಲಲ್ಲಿ ಕೆಂಪು ಕುರಿಮರಿ-ನಾಲಿಗೆ
೨೧. ಸೂಜಿ ಸಣ್ಣಕಾಗೆ ಬಣ್ಣ -ಕೂದಲು
೨೩. ಆರು ಕಾಲಿನ ಆನೆ, ಆನೆ ತಿನ್ನುತ್ತೆ ನೀರು ಕುಡಿಯಲ್ಲ-ನುಸಿ
೨೪. ಊರಿಗೆಲ್ಲ ಒಂದೇ ಕಂಬಳಿ-ಆಕಾಶ
೨೫. ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ-ಕುಂಕುಮ
೨೬. ಕರಿ ಹೊಲದ ಮದ್ಯದಲ್ಲಿ ಬೇಲಿ ದಾರಿ-ಬೈತಲೆ
೨೭. ಒಂದು ಬತ್ತಿ ಮನೆಯೆಲ್ಲ ಬೆಳಕು-ಸೂರ್ಯ
೨೮.ಕಣ್ಣಿಗೆ ಕಾಣೋದಿಲ್ಲ, ಕೈಗೆ ಸಿಗೋದಿಲ್ಲ -ಗಾಳಿ
೨೯. ಕಣ್ಣಿಗೆ ಹತ್ತಿರ ಕಾಲಿಗೆ ದೂರ-ಬೆಟ್ಟ
೩೦. ಊಟಕ್ಕೆ ಮೊದಲು ನಾನು ಅಂತ ಬರುತ್ತೆ -ಬಾಳೆ ಎಲೆ , ತಟ್ಟೆ

Thursday, October 9, 2008

ಕನ್ನಡ ಜನಪ್ರಿಯ ಒಗಟುಗಳು

೧. ಹತ್ತಾರು ಮಕ್ಕಳ ತಂದೆ ಅದಕ್ಕೆ ತಲೆಯ ಮೇಲೆ ಜುಟ್ಟು-ಹುಂಜ
೨. ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?-ನೆನಪು
೩. ನೀಲಿ ಸಾಗರದಲ್ಲಿ ಬೆಳ್ಳನೆ ಮೀನುಗಳು ನಾನ್ಯಾರು?-ತಾರೆಗಳು
೪. ಬಿಡಿಸಿದರೆ ಹೂವು, ಮದಚಿದರೆ ಮೊಗ್ಗು ,ಇದು ಏನು?-ಛತ್ರಿ
೫. ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ-ನೊಣ
೬. ಒಂಟಿಕಾಲಿನ ಕುಂಟ. ನಾನ್ಯಾರು?-ಬುಗರಿ
೭. ಕಪ್ಪು ಕಂಬಳಿ ನೆಂಟ ಎಲ್ಲವನು ನಾಶ ಮಾಡೋಕೆ ಹೊಂಟ-ಇಲಿ
೮. ಹಲ್ಲು ಹಾಕಿದರೆ ಹಾಲು ಕೆಡೋಲ್ಲ ಕಲ್ಲು ಹಾಕಿದರೆ ಕೆಡುತ್ತೇ-ಕಳ್ಳಿ
೯. ಕಾಡಿನಲ್ಲಿ ಹುಟ್ಟುವುದು ಕಾಡಿನಲ್ಲಿ ಬೆಳೆಯುವುದು ಕಡಿದಲ್ಲಿ ಕಂಪ ಸೂಸುವೆನು-ಶ್ರೀಗಂಧ
೧೦. ಹಸಿರು ಕೋಟೆ, ಬಿಳಿ ಕೋಟೆ, ಕೆಂಪಿನ ಕೋಟೆ ಈ ಕೋಟೆಯೊಳಗೆ ಕಪ್ಪು ಸಿಪಾಯಿಗಳು-ಪರಂಗಿ ಹಣ್ಣು
೧೧.ಒಂದು ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಕಾಣೋಲ್ಲ- ಜಾದಳಕಾಯಿ
೧೨. ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ-ಕಿವಿ
೧೩. ಕೆಂಪು ಕುದುರೆ ಕರಿ ತಡಿ ಒಬ್ಬ ಏರುತಾನೆ ಒಬ್ಬ ಇಳಿತಾನೆ-ರೊಟ್ಟಿ

Wednesday, October 8, 2008

ಕನ್ನಡ ಜನಪ್ರಿಯ ಒಗಟುಗಳು

೧. ನೀರಿರೋತಾವ ನಿಲ್ಲಲೇ ಕೋಣ-ಚಪ್ಪಲಿ
೨. ಹೋದ ನೆಂಟ, ಬಂದ ದಾರಿ ಗೊತ್ತಿಲ್ಲ-ನೆರಳು
೩. ಮರದೊಳಗೆ ಮರ ಹುಟ್ಟಿ ಮರ ಚಕ್ರ ಕಾಯಾಗಿ ತಿನ್ನಬಾರದ ಹಣ್ಣು ಬಲು ರುಚಿ-ಮನುಷ್ಯನ ಹುಟ್ಟು ಮಗು
೪. ಕಲ್ಲರಳಿ ಹೂವಾಗಿ, ಎಲ್ಲರಿಗೂ ಬೇಕಾಗಿ, ಮಲ್ಲಿಕಾರ್ಜುನನ ಗುಡಿಗೆ ಬೆಳಕಾಗಿ, ಬಲ್ಲವರು ಹೇಳಿ -ಸುಣ್ಣ
೫. ಚಿಣಿಮಿನಿ ಎನ್ನುವ ಕೆರೆ, ಚಿಂತಾಮಣಿ ಎನ್ನುವ ಹಕ್ಕಿ, ಕೆರೆ ಬತ್ತಿದರೆ ಹಕ್ಕಿಗೆ ಮರಣ -ದೀಪ
೬. ಹೋಗುತ್ತಾ, ಬರುತ್ತಾ ಇರುವುದು ಎರಡು,ಹೋದ ಮೇಲೆ ಬರಲಾರವು ಎರಡು-ಸಿರಿತನ-ಬಡತನ,
ಪ್ರಾಣ -ಬಡತನ
೭. ಒಂದು ಹಸ್ತಕ್ಕೆ ನೂರೆಂಟು ಬೆರಳು-ಬಾಳೆಗೊನೆ
೮. ಎಲ್ಲರ ಮನೆ ಅಜ್ಜಿಗೆ ಮೈಯೆಲ್ಲಾ ಕಜ್ಜಿ -ಜರಡಿ
೯. ಎಂದರೆ ತೆರಿತಾವ, ಅಪ್ಪ ಎಂದರೆ ಮುಚ್ಚುತಾವ-ಬಾಯಿ
೧೦. ದಾಸ್ ಬುರುಡೆ ದೌಲಥ ಬುರುಡೆ, ಲೋಕಕ್ಕೆಲ್ಲ ಎರಡೇ ಬುರುಡೆ-ಸೂರ್ಯ , ಚಂದ್ರ
೧೧. ಅಪ್ಪ ಆಕಾಶಕ್ಕೆ ಅವ್ವ ಪಾತಾಳಕ್ಕೆ ಮಗ ವ್ಯಾಪಾರಕ್ಕೆ ಮಗಳು ಮದುವೆಗೆ -ಅಡಿಕೆ ಮರ
೧೨.ಹಾರಾಡುತ್ತಿದೆ ಗಾಳಿಪತವಲ್ಲ , ಬಣ್ಣ ಮೂರಿರುವುದು ಕಾಮನಬಿಲ್ಲಲ್ಲ-ದ್ವಜ

Tuesday, October 7, 2008

ಕನ್ನಡ ಜನಪ್ರಿಯ ಒಗಟುಗಳು

೧. ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದೆ-ಮಲ್ಲಿಗೆ
೨. ಅಂಗೈ ಅಗಲದ ರೊಟ್ಟಿಗೆ ಲೆಕ್ಕವಿಲ್ಲದಷ್ಟು ಉಪ್ಪಿನಕಾಯಿ-ಆಕಾಶ, ನಕ್ಷತ್ರ
೩. ಸುಟ್ಟ ಹೆಣ ಮತ್ತೆ ಸುಡ್ತಾರೆ-ಇದ್ದಿಲು
೪. ಚಿನ್ನದ ಪೆಟ್ಟಿಗೆಯಲ್ಲಿ ಬೆಳ್ಳಿ ಲಿಂಗ- ಹಲಸಿನ ಹಣ್ಣು , ಬೀಜ
೫. ಅಂಗೈ ಕೊಟ್ಟರೆ ಮುಂಗೈನೂ ನುಂಗುತ್ತದೆ- ಬಳೆ
೬. ಒಂದು ಹಪ್ಪಳ ಊರಿಗೆಲ್ಲ ಊಟ- ಚಂದ್ರ
೭. ಆಕಾಶದಲ್ಲಿ ಕೊಡಲಿಗಳು ತೇಲಾಡುತ್ತವೆ- ಹುಣಸೇಹಣ್ಣು
೮. ನೀಲಿ ಕೆರೆಯಲಿ ಬಿಳಿ ಮೀನು-ನಕ್ಷತ್ರ
೯. ಒಂದು ತೇಲುತ್ತೆ ,ಒಂದು ಮುಳುಗುತ್ತೆ, ಒಂದು ಕರಗುತ್ತೆ.-ವಾರ,ತಿಂಗಳು,ವರ್ಷ
೧೧. ಬಾ ಅಂದರೆ ಬರೋಲ್ಲ , ಹೋಗು ಅಂದರೆ ಹೋಗೋಲ್ಲ-ಮಳೆ
೧೧. ನಾ ಇರುವಾಗ ಬರುತ್ತೆ , ನಾ ಹೋದ ಮೇಲೂ ಇರುತ್ತೆ-ಕೀರ್ತಿ
೧೨. ಬೆಳ್ಳಿ ಸಮುದ್ರದಲ್ಲಿ ಕಪ್ಪು ಸೂರ್ಯ-ಕಣ್ಣು
೧೩ ಅಕ್ಕನ ಮೇಲೆ ಛತ್ರಿ- ರೆಪ್ಪೆ
೧೪. ತಮ್ಮಂಗೆ ಮೂರು ಕಣ್ಣು ಅಮ್ಮಂಗೆ ಒಂದೇ ಕಣ್ಣು-ತೆಂಗಿನ ಕಾಯಿ
೧೫. ಅಕ್ಕ ಓದುತ್ತಾಳೆ ತಂಗಿ ನಡೀತ್ತಾಳೆ-ಕಣ್ಣು
೧೬.ಅಮ್ಮನ ಆಕಾಶವಾಣಿ ನಾನು-ಮಗು
೧೭. ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು-ಈರುಳ್ಳಿ
೧೮. ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ- ಬಾಳೆಹಣ್ಣು
೧೯. ಗೂಡ್ನಲ್ಲಿರೋ ಜೋಡಿ ಪಕ್ಷಿ ಊರೆಲ್ಲ ನೋಡುತ್ತೆ-ಕಣ್ಣು
೨೦. ಒಂದು ಮಡಕೆ, ಮಡಕೆಯೊಳಗೆ, ಕುಡಿಕೆ, ಕುಡಿಕೆಯಲ್ಲಿ ಸಾಗರ-ತೆಂಗಿನ ಕಾಯಿ
೨೧. ನೀನಿಲ್ಲದೆ ಊಟವಿಲ್ಲ- ಉಪ್ಪು
೨೨. ಬಿಳಿ ಸರದಾರನಿಗೆ ಕರಿ ಟೋಪಿ-ಬೆಂಕಿಕಡ್ಡಿ
೨೩. ಕಾಲಿಲ್ದ ಹುಡುಗಿಗೆ ಮಾರುದ್ದ ಕಡಿವಾಣ - ಸೂಜಿ
೨೪. ಮೂರು ಕಾಸಿನ ಕುದುರೆಗೆ ಮುನ್ನೂರು ರೂಪಾಯಿನ ಹಗ್ಗ-ಹೇನು ಕೂದಲು
೨೫. ಕೆಂಪು ಕುದುರೆಗೆ ಲಗಾಮು, ಓಬ್ಬ ಹತ್ತುತ್ತಾನೆ , ಇನ್ನೊಬ್ಬ ಇಳಿತಾನೇ-ಬೆಂಕಿ,ಬಾಣಲೆ, ದೋಸೆ
೨೬ . ಒಂದು ಮನೆಗೆ ಒಂದೇ ತೊಲೆ-ತಲೆ
೨೭. ಕಂದ ಬಂದ ಕೊಂದ ತಂದ-ಶ್ರೀ ರಾಮ ಚಂದ್ರ
೨೮. ಕಲ್ಲಿಲ್ಲದ ಬೆಟ್ಟ ಮರಳಿಲ್ಲದ ಮರುಭೂಮಿ-ಭೂಪಟ
೨೯. ಚಿಕ್ಕಕ್ಕನಿಗೆ ಪುಕ್ಕುದ್ದ-ಸೌಟು
೩೦. ಎರಡು ಮನೆಗೆ ಒಂದೇ ದೂಲ-ಮೂಗು














-








































.