೧. ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ-ಕಣ್ಣು
೨. ಕಾಸಿನ ಕುದುರೆಗೆ ಬಾಲದ ಲಗಾಮು-ಸೂಜಿ ದಾರ
೩. ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ-ಗಿಳಿ
೪. ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?-ಮೂಗು, ಬಾಯಿ
೫. ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?-ಮೊಟ್ಟೆ
೬. ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು? ಕೋಳಿ
೭. ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?-ರೈಲು
೮. ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ-ಗಡಿಯಾರ
೯. ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ-ಕಲ್ಲಂಗಡಿ ಹಣ್ಣು
೧೦. ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ-ತೆಂಗು
೧೨. ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ-ನೀರು
೧೩.ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.-ದಾರಿ
೧೪. ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.-ಯುಗಾದಿ
೧೫. ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .-ಬದನೆಕಾಯಿ.
೧೬. ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು
೧೭. ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.-ಅಕ್ಕಿ
೧೮. ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.-ನವಿಲು.
೧೯. ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.-ನದಿ
೨೦. ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.-ಕೋಳಿ
೨೧. ಮೋಟು ಗೋಡೆ ಮೇಲೆ, ದೀಪ ಉರೀತಿದೆ.-ಮೂಗುಬೊಟ್ಟು
೨೨. ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.-ನೆರಳು
೨೩. ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ-ಗಾಣ
೨೪. ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ-ಶ್ಯಾವಿಗೆ
೨೫. ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು-ತೆಂಗಿನಕಾಯಿ
೨೬. ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ-ತಂಬೂರಿ
೨೭. ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ-ಕಪ್ಪೆ
೨೮. ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ-ಕಸಪೊರಕೆ
೨೯. ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು-ಉಪ್ಪು
೩೦. ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?-ನಕ್ಷೆ
೩೧. ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.- ಅನ್ನದ ಅಗುಳು.
೩೨. ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.-ಸಾಬೂನು.
೩೩. ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ.
೩೪. ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.-ನೀರು
೩೫. ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.-ಎಣ್ಣೆ ದೀಪ.
೩೬. ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.-ಬಾಳೆ ಹಣ್ಣು.
೩೭. ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.-ಕನ್ನಡಿ .
೩೮. ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?-ದತ್ತುರಿಯ ಮುಳ್ಳು.
೩೯. ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.-ಕಮಲ.
೪೦. ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.-ಗಿರಣಿ
೪೧. ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.-ದುಡ್ಡು.
೪೨. ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.-ಸಗಣಿ.
೪೩. ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.- ಗರಗಸ.
೪೪. ಕಡ್ಲೆ ಕಾಳಷ್ಟು ಹಿಂಡಿ ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.-ಹಲ್ಲುಪುಡಿ.
೪೫. ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.-ಗಡಿಗೆಮಜ್ಜಿಗೆ.
೪೬. ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .-ರೊಟ್ಟಿ, ದೋಸೆ
೪೭. ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ, ತಮ್ಮ ಇಳಿತ್ತಾನೆ-ಬೆಂಕಿ, ಸುಣ್ಣ ಹಚ್ಚಿದ ಹಂಚು, ಹೊಗೆ, ರೊಟ್ಟಿ
೪೮. ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.-ಕಣ್ಣು.
೪೯. ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.-ಬೆಣ್ಣೆ ಉಂಡೆ.
೫೦.ಕುತ್ತಿಗೆ ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.-ಅಂಗಿ.
Subscribe to:
Post Comments (Atom)
8 comments:
nice ogatugalu
nice ogatus
ಸೂಪರ್ ಒಗಟುಗಳು
Very very very good
I like
kannadajanapriyaogatugalu
Very very very good
I like
kannadajanapriyaogatugalu
Awesome 😀😀😀😀
ಸೂಪರ್
Super
Post a Comment