೧. ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ-ಮಾವು
೨. ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ-ಬೆಕ್ಕು
೩. ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ_ಕಪ್ಪೆ
೪. ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ ಕುತಗುಟ್ಟುವುದು-ಸುಣ್ಣ
೫. ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ-ದೀಪ
೬. ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ-ಚಪ್ಪಲಿ
೭. ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು ಕೆಳಗಾಗಿ ಓದುವುದು-ನದಿ
೮. ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ-ಮೇಡು
೯. ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ-ಆಕಾಶ
೧೦. ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ-ಜೋಳದ ದಂಟು
೧೧. ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?-ಸಾಲಿಗ್ರಾಮ
೧೨. ಕರಿ ಹುಡುಗನಿಗೆ ಬಿಳಿ ಟೋಪಿ -ಹೆಂಡದ ಮಡಿಕೆ
೧೩. ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು-ನಾಣ್ಯ
೧೪. ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.-ತಿಗಣೆ
೧೫. ಕುದುರೆ ಬಾಲದಿಂದ ನೀರು ಕುಡಿಯುತ್ತದೆ-ಹೇನು
೧೬. ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.-ಸೀತ ಫಲ
೧೭. ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.-ಕಣ್ಣು
೧೮. ಮನೆ ಮೇಲೆ ಮಲ್ಲಿಗೆ ಹೂವು.-ಮಂಜು
೧೯. ಹಾರಿದರೆ ಹನುಮಂತ ಕೂಗಿದರೆ ಶಂಖ.-ಕಪ್ಪೆ
೨೦. ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.-ಸುಣ್ಣ
೨೧.ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.-ಪೋಸ್ಟ್ ಕಾರ್ಡ್
೨೨. ಬಿಳಿ ಕುದುರೆಗೆ ಹಸಿರು ಬಾಲ.-ಮೂಲಂಗಿ
೨೩. ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.-ಕುಂಕುಮ
೨೪. ಬರೋದ ಕಂಡು ಕೈ ಒಡ್ತಾರೆ.-ಬಸ್
Subscribe to:
Post Comments (Atom)
1 comment:
ಕಂತಾಮಣಿ ಎಂಬ ಪಕ್ಷಿ
Post a Comment